Tuesday, 13th May 2025

ಕುಲ್ಲು: ಭೀಕರ ಅಪಘಾತದಲ್ಲಿ ಏಳು ಜನರ ಸಾವು

ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಜನರು ಮೃತಪಟ್ಟು, 10 ಜನರು ಗಾಯಗೊಂಡಿದ್ದಾರೆ.

ಕುಲ್ಲು ಜಿಲ್ಲೆಯ ಬಂಜಾರ್ ಉಪ ವಿಭಾಗದ ಘಿಯಾಘಿ ಬಳಿಯಲ್ಲಿ ಟೆಂಪೋ ಟ್ರಾವೆಲ್ಲರ್ ಕಮರಿಗೆ ಬಿದ್ದು ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಬಂಜಾರ್ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಕುಲ್ಲು ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು.

ಗಾಯಗೊಂಡವರ ಪೈಕಿ ಹೆಚ್ಚಿನವರು ರಾಜಸ್ಥಾನ, ಮಧ್ಯಪ್ರದೇಶ, ಹರ್ಯಾಣ ಮತ್ತು ದಿಲ್ಲಿ ರಾಜ್ಯಗಳಿಗೆ ಸೇರಿದವರಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಗಾಯಾಳುಗಳ ರಕ್ಷಣಾ ಕಾರ್ಯಾಚರಣೆಯನ್ನು ಜಿಲ್ಲಾಡ ಳಿತವು ತ್ವರಿತವಾಗಿ ಕೈಗೊಂಡಿತು. ಜತೆಗೆ ಸ್ಥಳೀಯರು ನೆರವು ನೀಡಿದ್ದಾರೆ. ಅವರೆಲ್ಲರಿಗೂ ಅಭಿನಂದನೆ ತಿಳಿಸುವ ಎಂದು ಹೇಳಿದ್ದಾರೆ.