Wednesday, 14th May 2025

ಇಂಡೋಸ್ಪಿರಿಟ್ಸ್‌ ಮಾಲೀಕ ಸಮೀರ್ ಮಹೇಂದ್ರು ಬಂಧನ

ವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಇಂಡೋಸ್ಪಿರಿಟ್ಸ್‌ ಮಾಲೀಕ ಸಮೀರ್ ಮಹೇಂದ್ರು ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಸಮೀರ್ ಮಹೇಂದ್ರು ಅವರನ್ನು ಬುಧವಾರ ಬೆಳಿಗ್ಗೆ ಬಂಧಿಸಲಾಗಿದೆ ಎಂದು ಮೂಲ ಗಳು ತಿಳಿಸಿರುವುದಾಗಿ ವರದಿಯಾಗಿದೆ.

ಅಬಕಾರಿ ನೀತಿಗೆ ಸಂಬಂಧಿಸಿ ಈಗಾಗಲೇ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವರ ವಿರುದ್ಧ ಈಗಾಗಲೇ ಸಿಬಿಐ ಪ್ರಕರಣ ದಾಖಲಿಸಿದೆ.

ಹಣವನ್ನು ಬೇರೆಡೆ ವರ್ಗಾಯಿಸಲು, ಸರ್ಕಾರಿ ಸೇವೆಯಲ್ಲಿದ್ದ ಕೆಲ ಮಂದಿಗೆ ತಲುಪಿಸಲು ಎಲ್‌-1 ಪರವಾನಗಿದಾರರು ಚಿಲ್ಲರೆ ಮಾರಾಟಗಾರರಿಗೆ ‘ಕ್ರೆಡಿಟ್‌ ನೋಟ್‌’ಗಳನ್ನು ನೀಡುತ್ತಿದ್ದರು. ದಾಖಲೆಗಳನ್ನು ತಿರುಚಲು ಖಾತೆಗಳ ಪುಸ್ತಕಗಳಲ್ಲಿ ತಪ್ಪು ಲೆಕ್ಕ ತೋರಿಸುತ್ತಿದ್ದರು ಎಂದೂ ಆರೋಪಿಸಲಾಗಿದೆ.