Monday, 12th May 2025

2,756 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ.

ಕಳೆದ 24 ಗಂಟೆಯಲ್ಲಿ ಮತ್ತೆ 2,756 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,799 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ 28,593 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.75ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 4,40,54,621 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 4,73,682 ಜನರಿಗೆ ವ್ಯಾಕ್ಸಿನ್ ನೀಡಲಾ ಗಿದ್ದು, ದೇಶದಲ್ಲಿ ಈವರೆಗೆ 2,18,97,88,104 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,39,546 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.