Saturday, 10th May 2025

86ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಹಾವೇರಿ : ನವೆಂಬರ್ 11 ರಂದು ಹಾವೇರಿಯಲ್ಲಿ ನಿಗದಿಯಾಗಿದ್ದ 86ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ ಗೆ ಮುಂದೂಡ ಲಾಗಿದ್ದು, ಹೊಸ ದಿನಾಂಕದ ಕುರಿತು ಇಂದು ಘೋಷಣೆಯಾಗುವ ಸಾಧ್ಯತೆ ಇದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂದು ಪರಿಷತ್ ಮೂಲಗಳು ತಿಳಿಸಿವೆ.

ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಿಗದಿಪಡಿಸಲಾಗಿತ್ತು. ಆದರೆ ತಯಾರಿ ಕಾರ್ಯಕ್ಕೆ ಹೆಚ್ಚಿನ ಕಾಲಾವಕಾಶ ಬೇಕಿರುವ ಹಿನ್ನೆಲೆಯಲ್ಲಿ ಸಮ್ಮೇಳನವನ್ನು ಮುಂದೂಡಲಾಗಿದೆ. ಹೊಸದಿನಾಂಕವನ್ನು ಅ.12 ರಂದು ಕಾರ್ಯಕಾರಿ ಮಂಡಳಿ ಸಭೆ ಬಳಿಕ ಘೋಷಿಸಲಾಗುತ್ತದೆ.