Sunday, 11th May 2025

ಕರ್ತವ್ಯನಿರತ ಮಹಿಳಾ ಪೇದೆ ಆತ್ಮಹತ್ಯೆಗೆ ಯತ್ನ

ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಕರ್ತವ್ಯನಿರತ ಮಹಿಳಾ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಮಹಿಳಾ ಪೇದೆಯಾಗಿ ಕರ್ತವ್ಯ ನಿಭಾಯಿಸುತ್ತಿದ್ದ ಜ್ಯೋತಿ ಭಾಯಿ ಸಿಂಗ್‌ ಪರ್ಮರ್‌ (33) ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಕರ್ತವ್ಯನಿರತರಾಗಿದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿದ್ದಾರೆ. ಜ್ಯೋತಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬರೆದಿರುವ ಡೆತ್‌ ನೋಟ್ ಪತ್ತೆಯಾಗಿದೆ.

ಇವರ ಪತಿ ಓಂಬೀರ್ ಸಿಂಗ್ ಎಂ ಆರ್‌ ಪಿಎಲ್‌ ನಲ್ಲಿ ಸಹಾಯಕ ಕಮಾಂಡೆಂಟ್ ಆಗಿದ್ದಾರೆ. ಗಂಡ – ಹೆಂಡತಿ ಇಬ್ಬರೂ ರಾಜಸ್ಥಾನ ಭರತ್‌ ಪುರ್‌ ನವರು. ಜ್ಯೋತಿ ಭಾಯಿ 2010ನೇ ಬ್ಯಾಚ್‌ ನವರು.