
ಜಿಲ್ಲಾ ಸರಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಕೆ. ಕೃಷ್ಣಪ್ಪ ಹಾಗೂ ಜಿಲ್ಲಾಧ್ಯಕ್ಷ ಟಿ.ಎ. ನಟರಾಜ್ ಅವರ ನೇತೃತ್ವದಲ್ಲಿ ಈ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ಈ ಪ್ರತಿಭಟನಾ ಮೆರವಣಿಗೆಯು ನಗರದ ಟೌನ್‌ಹಾಲ್ ವೃತ್ತದಿಂದ ಪ್ರಾರಂಭಗೊಂಡು ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಸಾಗಲಿದ್ದು, ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾಧ್ಯಕ್ಷ ನಟರಾಜು ತಿಳಿಸಿ ದ್ದಾರೆ.
ಈ ಪ್ರತಿಭಟನೆಯಲ್ಲಿ ಸರಕಾರಿ ನ್ಯಾಯಬೆಲೆ ಅಂಗಡಿ ಹಾಗೂ ಕೈಗಾಡಿ ಸೀಮೆಎಣ್ಣೆ ವಿತರಕರ ಸಂಘದವರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.