Monday, 12th May 2025

ಛಾತ್ ಪೂಜೆಗಾಗಿ ಅಡುಗೆ ಮಾಡುತ್ತಿದ್ದಾಗ ಬೆಂಕಿ ಅವಘಡ: 25 ಜನರಿಗೆ ಗಾಯ

ಔರಂಗಾಬಾದ್: ಬಿಹಾರದ ಔರಂಗಾಬಾದ್ ಜಿಲ್ಲೆಯ ಮನೆಯೊಂದರಲ್ಲಿ ಶನಿವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 25 ಜನರು ಗಾಯ ಗೊಂಡಿದ್ದಾರೆ.
ಮನೆಯ ಮಾಲೀಕ ಅನಿಲ್ ಗೋಸ್ವಾಮಿ ಅವರ ಕುಟುಂಬವು 2.30 ರ ಸುಮಾ ರಿಗೆ ಛಾತ್ ಪೂಜೆಗಾಗಿ ಅಡುಗೆ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಿದರು.
ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದವು. ಆದರೆ, ಅಡುಗೆ ಅನಿಲ ಸಿಲಿಂಡರ್ಗಳು ಸ್ಫೋಟ ಗೊಂಡು ಬೆಂಕಿ ಮತ್ತಷ್ಟು ಆವರಿಸುವಂತೆ ಮಾಡಿತು. ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದನ್ನು ಪತ್ತೆ ಮಾಡಲು ತನಿಖೆ ನಡೆಯುತ್ತಿದೆ ಎಂದು ಹೇಳಿದರು.