Sunday, 11th May 2025

ಶೀಘ್ರದಲ್ಲೇ ಸಪ್ತಪದಿ ತುಳಿಯಲಿದ್ದಾರೆ ಅಭಿಷೇಕ್ ಅಂಬರೀಷ್

ಬೆಂಗಳೂರು: ದಿವಂಗತ ನಟ ರೆಬಲ್ ಸ್ಟಾರ್ ಅಂಬರೀಷ್ ಮತ್ತು ಸಂಸದೆ ಸುಮಲತಾ ಪುತ್ರ ಅಭಿಷೇಕ್ ಅಂಬರೀಷ್ ಅವರು ಶೀಘ್ರದಲ್ಲೇ ಸಪ್ತಪದಿ ತುಳಿಯಲಿದ್ದಾರೆ.
ಅಭಿಷೇಕ್ ಅಂಬರೀಷ್ ಅವರ ಮದುವೆ ನಿಶ್ಚಯವಾಗಿದ್ದು, ನಿಶ್ಚಿತಾರ್ಥ ಸಮಾರಂಭ ಡಿಸೆಂಬರ್ ಎರಡನೇ ವಾರದಲ್ಲಿ ಪ್ಯಾಲೇಸ್ ಗ್ರೌಂಡ್ ನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಫ್ಯಾಷನ್ ಲೋಕದ ದಿಗ್ಗಜ ಪ್ರಸಾದ್ ಬಿದ್ದಪ್ಪ ಪುತ್ರಿ, ಅವಿವಾ ಬಿದ್ದಪ್ಪ ಜೊತೆ ಅಭಿಷೇಕ್ ಸಪ್ತಪದಿ ತುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ನಿಶ್ಚಿತಾರ್ಥದ ಸಿದ್ಧತೆಗಳು ನಡೆಯುತ್ತಿದ್ದು, ಮದುವೆ ದಿನಾಂಕ ಸೇರಿದಂತೆ ಹಲವು ಮಾಹಿತಿ ಗಳು ಇನ್ನಷ್ಟೇ ಹೊರಬೀಳಬೇಕಿದೆ. ನಾನು ನಿತ್ಯ ಕನಕಪುರಕ್ಕೆ ಶೂಟಿಂಗ್ಗೆ ಹೋಗುತ್ತಿದ್ದೇನೆ. ಇದರ ಮಧ್ಯೆ ಯಾವಾಗ ಹುಡುಗಿ ನೋಡಿದೆ, ಯಾವಾಗ ನಿಶ್ಚಿತಾರ್ಥ ಮಾಡಿಕೊಂಡೆ ಎಂದು ಗೊತ್ತಿಲ್ಲ ಎಂದು ಹೇಳಿದ್ದಾರೆ.