Tuesday, 13th May 2025

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅತಿ ಹೆಚ್ಚು ತೆರಿಗೆ ಪಾವತಿದಾರ

ನವದೆಹಲಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತೊಮ್ಮೆ ಆದಾಯ ತೆರಿಗೆ ಇಲಾಖೆಯ ಪ್ರಶಂಸನೆ ಪಾತ್ರವಾಗಿದ್ದು, ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದು, ಭಾರತೀಯ ಆದಾಯ ತೆರಿಗೆ ಇಲಾಖೆಯಿಂದ ವಿಶೇಷ ಪತ್ರವೊಂದು ಕಳುಹಿಸಿದ್ದಾರೆ.

ಹಿಂದಿ ಚಲನಚಿತ್ರೋದ್ಯಮದಿಂದ ಅತಿ ಹೆಚ್ಚು ತೆರಿಗೆ ಪಾವತಿಸುವವರಲ್ಲಿ ನಟ ಅಕ್ಷಯ್ ಕುಮಾರ್ ಸಹ ಒಬ್ಬರು ಎಂದು ಗೌರವಯುತವಾಗಿ ಇಲಾಖೆ ಬಾಲಿವುಡ್ ಕಿಲಾಡಿಗೆ ಸಮ್ಮಾನ್​ ಪತ್ರವನ್ನು ನೀಡಿದೆ.

ಈ ಬಾರಿ 29.5 ಕೋಟಿ ತೆರಿಗೆ ಪಾವತಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಸದ್ಯ ಅಕ್ಷಯ್ ಟಿನು ದೇಸಾಯಿ ಅವರ ಮುಂಬರುವ ಚಿತ್ರದ ಶೂಟಿಂಗ್ ​ಗಾಗಿ ಯುಕೆ ಅಲ್ಲಿ ಇದ್ದಾರೆ. ಹೀಗಾಗಿ ಸಮ್ಮಾನ್ ಪತ್ರವನ್ನು ಅವರ ತಂಡ ಸ್ವೀಕರಿಸಿದೆ ಎಂದು ಹೇಳಲಾಗಿದೆ.

ಕಳೆದ 5 ವರ್ಷಗಳಲ್ಲಿ ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರರ ಪೈಕಿ ನಿರಂತರವಾಗಿ ನಟ ಅಕ್ಷಯ್‌ಗೆ ಈ ಗೌರವವನ್ನು ನೀಡಿರುವುದು ಇದೇ ಮೊದಲ ನಿದರ್ಶನವಲ್ಲ. ಈ ಹಿಂದೆಯೂ ಅಕ್ಷಯ್ ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರ ಎಂಬ ಕೀರ್ತಿಗೆ ಭಾಜನರಾಗಿದ್ದರು.