Wednesday, 14th May 2025

ಮತದಾನ ಮಾಡಿದ ಮೊದಲ ನಟಿ ಲೀಲಾವತಿ

ನೆಲಮಂಗಲ : ಎಲ್ಲಾ ಪಕ್ಷಗಳು ಮತ ಪ್ರಚಾರದಲ್ಲಿ ತೊಡಗಿಕೊಂಡಿದ್ದು ಸ್ಟಾರ್ ನಟ, ನಟಿಯರು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಕನ್ನಡದ ಹಿರಿಯ ನಟಿ ಲೀಲಾವತಿ ಮತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಮೇ 10ರಂದು ಮತದಾನ ದಿನಾಂಕ ಘೋಷಣೆ ಆಗಿದ್ದರೂ, ಚುನಾವಣೆ ಆಯೋಗ ಹಿರಿಯ ನಾಗರಿಕರಿಗೆ ವಿಶೇಷ ಸೌಲಭ್ಯ ಕಲ್ಪಿಸಿರುವುದರಿಂದ ಲೀಲಾವತಿ ಮತದಾನ ಮಾಡಿದ್ದಾರೆ. ಈ ಬಾರಿಯ ಮತದಾನ ಮಾಡಿದ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಲೀಲಾವತಿ ಪಾತ್ರರಾಗಿ ದ್ದಾರೆ.

ಎಂಭತ್ತು ವರ್ಷ ತುಂಬಿದ ನಾಗರಿಕರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶ ವನ್ನು ಚುನಾವಣೆ ಆಯೋಗ ಕಲ್ಪಿಸಿದೆ.

ಇದರ ಅಡಿಯಲ್ಲಿ ಹಿರಿಯ ನಟಿ ಲೀಲಾವತಿ, ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಮನೆಯಲ್ಲಿ ಮತದಾನ ಮಾಡಿದ್ದಾರೆ. ಮಗ ವಿನೋದ್ ರಾಜ್ ಸಹಾಯದಿಂದ ಲೀಲಾವತಿ ಮನೆಯಲ್ಲಿ ಮತದಾನ ಮಾಡಿದ್ದಾರೆ.

ಲೀಲಾವತಿ ಮಾತನಾಡಿ, ‘ಚುನಾವಣೆ ಆಯೋಗ ಈ ಅವಕಾಶ ಕಲ್ಪಿಸಿದ್ದು ನನ್ನಂತಹ ಹಿರಿಯರಿಗೆ ಅನುಕೂಲವಾಗಿದೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿ’ ಎಂದು ಹೇಳಿದರು. ಮತದಾನ ಮನೆಯಲ್ಲೇ ಮಾಡಿದ್ದು ಸಂಭ್ರಮ ತಂದಿದೆ ಎಂದಿದ್ದಾರೆ.