Wednesday, 14th May 2025

ಹಿನ್ನೆಲೆ ಗಾಯಕಿ ಸಂಗೀತಾ ಸಚಿತ್ ಇನ್ನಿಲ್ಲ

ತಿರುವನಂತಪುರ: ಕನ್ನಡ, ಮಲಯಾಳಿ, ತಮಿಳು ಮತ್ತು ತೆಲುಗು ಭಾಷೆಗಳ ಹಲವಾರು ಚಿತ್ರಗಳಲ್ಲಿ ಹಿನ್ನೆಲೆ ಗಾಯಕಿಯಾಗಿ ಧ್ವನಿ ನೀಡಿದ ಗಾಯಕಿ ಸಂಗೀತಾ ಸಚಿತ್ (46) ಕೊನೆಯುಸಿರೆಳೆದಿದ್ದಾರೆ.

ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ತಮಿಳಿನ ನಾಲೈ ತೀರ್ಪು ಚಿತ್ರದಲ್ಲಿ ಹಾಡುವ ಮೂಲಕ ಸಂಗೀತ ಲೋಕಕ್ಕೆ ಪದಾರ್ಪಣೆ ಮಾಡಿದ್ದ ಸಂಗೀತಾ ಅವರಿಗೆ ಹೆಸರು ತಂದುಕೊಟ್ಟದ್ದು ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಸಂಯೋಜಿಸಿದ ತಮಿಳು ಚಲನಚಿತ್ರ ಮಿಸ್ಟರ್ ರೋಮಿಯೋ. ಸುಮಾರು 200 ಹಾಡುಗಳನ್ನು ಹಾಡಿದ್ದಾರೆ.

ಇವರ ಹಾಡಿಗೆ ಮನಸೋತಿದ್ದ ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಅವರು ಕಾರ್ಯಕ್ರಮವೊಂದರಲ್ಲಿ ತಾವೇ ಧರಿಸಿದ್ದ 10 ಪವನ್ ಚಿನ್ನದ ಸರವನ್ನು ಉಡುಗೊರೆ ಯಾಗಿ ನೀಡಿದ್ದರು.