Thursday, 15th May 2025

ಸಿ.ಎಂ.ಉದಾಸಿ ನಿಧನಕ್ಕೆ ಸುನೀಲ್ ಪುರಾಣಿಕ್ ಸಂತಾಪ

ಬೆಂಗಳೂರು: ಮಾಜಿ ಸಚಿವರು, ಹಾನಗಲ್ ಕ್ಷೇತ್ರದ ಶಾಸಕರಾದ ಸಿ.ಎಂ. ಉದಾಸಿ ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಿರಿಯ ರಾಜಕೀಯ ಮುತ್ಸದ್ದಿ ಸಿ.ಎಂ.ಉದಾಸಿ ಅವರು ಅತ್ಯಂತ ಸರಳ ಸಜ್ಜನ ರಾಜಕಾರಣಿ. ಬಡವರು, ಜನ ಸಾಮಾನ್ಯರ ಬಗ್ಗೆ ಅಪಾರ ಕಾಳಜಿ ಇದ್ದ ಸಹೃದಯ ರಾಜಕಾರಣಿ. ಉದಾಸಿ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ಅವರು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿ ಅವರ ಸಾಧನೆ ಅಪಾರ. ಸಾಕಷ್ಟು ಯುವಕರಿಗೆ ಅವರು ಮಾದರಿಯಾಗಿದ್ದರು. ಉದಾಸಿಯವರ ನಿಧನದಿಂದ ಅವರ ಅಪಾರ ಅಭಿಮಾನಿ ಬಳಗ ದುಃಖದಲ್ಲಿ ಮುಳುಗಿದೆ.
ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ಭಗವಂತ ಕರುಣಿಸಲಿ ಎಂದು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *