Saturday, 10th May 2025

ವಿಕ್ರಾಂತ್ ರೋಣ ನಿರ್ಮಾಪಕ ಜಾಕ್ ಮಂಜು ಡಿಸ್ಚಾರ್ಜ್‌ ಇಂದು ?

ಬೆಂಗಳೂರು: ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕ, ವಿತರಕ ಜಾಕ್ ಮಂಜು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಾಕ್ ಮಂಜು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕರಾಗಿದ್ದಾರೆ.

ಹೃದಯ ಸಂಬಂಧಿ ಸಮಸ್ಯೆ ಉಂಟಾಗಿದ್ದರಿಂದ ಜಾಕ್ ಮಂಜು ಅವರನ್ನು ಜೂ.10ರಂದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ನಾಲ್ಕು ದಿನಗಳಿಂದ ಅವರು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಕ್ ಮಂಜು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.