Sunday, 11th May 2025

ತಿಥಿ-ಸಮಾರಾಧನೆಯ ಊಟ ಸೇವಿಸಿ ನೂರು ಮಂದಿ ಅಸ್ವಸ್ಥ

ಛತ್ತೀಸಗಡ: ಮಹಸಮುಂಡ್‌ ಜಿಲ್ಲೆಯ ಗ್ರಾಮವೊಂದರಲ್ಲಿ ಆಯೋಜಿಸಿದ್ದ ಮೃತ ವ್ಯಕ್ತಿಯ ಹತ್ತನೇ ದಿನದ ಕಾರ್ಯ ಕಾರ್ಯಕ್ರಮ ದಲ್ಲಿ ಆಹಾರ ಸೇವಿಸಿದ ನಂತರ ಮಕ್ಕಳು ಸೇರಿದಂತೆ, ನೂರು ಮಂದಿ ಅಸ್ವಸ್ಥಗೊಂಡಿದ್ದಾರೆ.

ಯಾವುದೇ ಪ್ರಾಣಾಪಾಯವಾದ ವರದಿಯಾಗಿಲ್ಲ. ಚಿಕಿತ್ಸೆ ಪಡೆಯುತ್ತಿರುವವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಪಿಥೋರಾ ಡೆವಲಪ್‌ಮೆಂಟ್‌ ಬ್ಲಾಕ್ ವ್ಯಾಪ್ತಿಯಲ್ಲಿರುವ ಅನ್ಸುಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಗ್ರಾಮದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ದಿಲೀಪ್ ಸಾಹು ಎಂಬುವವರು ದಸ್‌ಗಾತ್ರ್‌ ಕಾರ್ಯಕ್ರಮವನ್ನು ಆಯೋಜಿಸಿದ್ದರು ಎಂದು ಜಿಲ್ಲಾಧಿಕಾರಿ ಡೊಮನ್ ಸಿಂಗ್ ತಿಳಿಸಿದ್ದಾರೆ.

ಅಸ್ವಸ್ಥರಾದ ನೂರು ಜನರಲ್ಲಿ, 50 ಮಕ್ಕಳು ಮತ್ತು ಇತರೆ ಹತ್ತು ಜನರನ್ನು ಎರಡು ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.

ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲೆ ಮತ್ತು ಸುತ್ತಲಿನ ಶಿಕ್ಷಣ ಸಂಸ್ಥೆಗಳ ಮಕ್ಕಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು. ಆಹಾರ ಸೇವಿಸಿ ಎರಡು- ಮೂರು ಗಂಟೆಗಳ ನಂತರ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು ನೂರು ಮಂದಿ ಅಸ್ವಸ್ಥರಾದರು.

Leave a Reply

Your email address will not be published. Required fields are marked *