Thursday, 15th May 2025

1,233 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

#covid

ನವದೆಹಲಿ: ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದೆ.

ಕಳೆದ 24 ಗಂಟೆಯಲ್ಲಿ 1,233 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ ಯಾಗಿದ್ದು, 31 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 521101ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಇನ್ನು 14704 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1876 ಜನರು ಕೋವಿಡ್ ನಿಂದ ಗುಣಮುಖ ರಾಗಿದ್ದಾರೆ. ದೇಶದಲ್ಲಿ ಈವರೆಗೆ 42487410 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 1,83,82, 41,743 ಡೋಸ್ ಲಸಿಕೆ ಹಾಕಲಾಗಿದೆ.