Monday, 12th May 2025

ಐಐಟಿ ಮದ್ರಾಸ್ ಕ್ಯಾಂಪಸ್‌: ಪ್ರಕರಣಗಳ ಸಂಖ್ಯೆ 171ಕ್ಕೆ ಏರಿಕೆ

#coronaಚೆನ್ನೈ: ಐಐಟಿ ಮದ್ರಾಸ್ ಕ್ಯಾಂಪಸ್‌ನಲ್ಲಿ ಮತ್ತೆ 31ಕ್ಕೂ ಅಧಿಕ ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 171ಕ್ಕೆ ಏರಿಕೆಯಾಗಿದೆ.

ಇದುವರೆಗೂ ಐಐಟಿ ಮದ್ರಾಸ್ ಕ್ಯಾಂಪಸ್‌ನಲ್ಲಿ 171 ಕೋವಿಡ್ 19 ಪ್ರಕರಣ ಗಳು ಪತ್ತೆಯಾಗಿವೆ ಎಂದು ತಮಿಳುನಾಡಿನ ಆರೋಗ್ಯ ಕಾರ್ಯದರ್ಶಿ ಹೇಳಿದರು. ಕ್ಯಾಂಪಸ್‌ನಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 111 ಆಗಿದೆ ಎಂದು ತಿಳಿಸಿದ್ದಾರೆ.

ಐಐಟಿ ಮದ್ರಾಸ್ ಕ್ಯಾಂಪಸ್‌ನಲ್ಲಿ ಏ.21ರಂದು 12 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು. ಬಳಿಕ ಕ್ಯಾಂಪಸ್‌ನಲ್ಲಿ ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಸೋಂಕು ತಗುಲಿದ ವಿದ್ಯಾರ್ಥಿಗಳನ್ನು ಕ್ಯಾಂಪಸ್‌ನಲ್ಲಿಯೇ ಕ್ವಾರಂಟೈನ್ ಮಾಡಲಾಗುತ್ತಿದೆ.

ಚೆನ್ನೈ ನಗರದಲ್ಲಿ ಬುಧವಾರ 59 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು.