Thursday, 15th May 2025

2,323 ಹೊಸ ಸೋಂಕುಗಳು ಪತ್ತೆ

covid

ನವದೆಹಲಿ: ಕರೋನಾ ಸೋಂಕು ಇದ್ದಕ್ಕಿದ್ದಂತೆ ಎರಡು ಸಾವಿರದಷ್ಟು ಗಡಿ ದಾಟಿದ್ದು, 25 ಮಂದಿ ಮೃತಪಟ್ಟಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, 2,323 ಹೊಸ ಸೋಂಕುಗಳು ಪತ್ತೆಯಾಗಿವೆ.

ಈ ಮೂಲಕ ಸೋಂಕಿನ ಪ್ರಮಾಣ 4,31,34,145 ಕ್ಕೆ ಏರಿಕೆಯಾಗಿದೆ. ಸಮಾಧಾನಕರ ಅಂಶವೆಂದರೆ ಸಕ್ರಿಯ ಪ್ರಕರಣಗಳ ಸಂಖ್ಯೆ14,996 ಕ್ಕೆ ಕುಸಿದಿದೆ.

24 ಗಂಟೆಗಳ ಅವಧಿಯಲ್ಲಿ 48 ಸಕ್ರಿಯ ಪ್ರಕರಣಗಳು ಕಡಿಮೆಯಾಗಿವೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,25,94,801 ಕ್ಕೆ ಏರಿದೆ. ನಿನ್ನೆ 25 ಸಾವುಗಳೊಂದಿಗೆ ಸಾವಿನ ಸಂಖ್ಯೆ 5,24,348 ಕ್ಕೆ ಏರಿದೆ ಎಂದು ಸಚಿವಾಲಯ ತಿಳಿಸಿದೆ.