Friday, 16th May 2025

27,409 ಕೋವಿಡ್ ಪ್ರಕರಣಗಳು ದೃಢ

#corona

ನವದೆಹಲಿ: ಮಂಗಳವಾರ ದೇಶದಾದ್ಯಂತ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 27,409 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 347 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ಭಾರಿ ಇಳಿಕೆಯಾದಂತಾಗಿದೆ.

ಸೋಮವಾರ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ 34,113 ಪ್ರಕರಣಗಳು ವರದಿಯಾಗಿದ್ದವು. 82,817 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 4,23,127 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಈವರೆಗೆ 173.42 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.