Monday, 12th May 2025

ಮೋಟಾರ್ ಸೈಕಲ್‌ಗೆ ಡಂಪರ್ ಟ್ರಕ್ ಡಿಕ್ಕಿ: ಮೂವರ ಸಾವು

ಭೋಪಾಲ್: ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಹಳ್ಳಿಯೊಂದರ ಬಳಿ ಮೋಟಾರ್ ಸೈಕಲ್‌ಗೆ ಡಂಪರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

ಗುರುವಾರ ರಾತ್ರಿ ಪಜಿ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ರೋಹಿತ್ ನಾಮದೇವ್ (22), ಸುನಿಲ್ ಸೇನ್ (35) ಮತ್ತು ರಾಮಭರೋಸ್ ಪಾಟ್ಕರ್ (35) ಎಂದು ಗುರುತಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಸಿಂಗ್ ತಿಳಿಸಿದ್ದಾರೆ.

ಟ್ರಕ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಾಹನ ವಶಪಡಿಸಿಕೊಂಡಿದ್ದು, ಅಪಘಾತದ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.