Friday, 16th May 2025

30,615 ಹೊಸ ಕರೋನಾ ಪ್ರಕರಣಗಳು ಪತ್ತೆ

#corona

ನವದೆಹಲಿ: ಮಹಾಮಾರಿ ಕರೋನಾ ಇಳಿಕೆಯ ಹಾದಿ ಮುಂದುವರೆದಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,615 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 514 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ಪ್ರಕರಣಗಳ ಒಟ್ಟು ಸಂಖ್ಯೆ 4,27,23,558ಕ್ಕೆ ಏರಿಕೆಯಾಗಿದೆ. ಅಲ್ಲದೇ ಮೃತಪಟ್ಟವರ ಸಂಖ್ಯೆ 5,09,872ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,70,240ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 82,988 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 41843446ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,73,42,62,440 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.