ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 31,222 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,30,58,843ಕ್ಕೆ ಏರಿಕೆಯಾಗಿದೆ.
290 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 441042 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 392864 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 42942 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32224937 ಜನರು ಕೋವಿಡ್ ನಿಂದ ಗುಣಮುಖ ರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಈವರೆಗೆ ಒಟ್ಟು 69,90,62,776 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.