ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 37,875 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕುಸಿತವಾಗಿದ್ದು, 369 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 441411 ಕ್ಕೆ ಏರಿಕೆಯಾಗಿದೆ.
391256 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 39114 ಜನರು ಗುಣಮುಖರಾಗಿದ್ದಾರೆ. 24 ಗಂಟೆಯಲ್ಲಿ 78,47,625 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 70,75,43,018 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.