Sunday, 11th May 2025

ದುರ್ನಡತೆ: ಮತ್ತೆ ಮೂರು ಸಂಸದರ ಅಮಾನತು

ನವದೆಹಲಿ: ಕಲಾಪಕ್ಕೆ ಅಡ್ಡಿ ಪಡಿಸಿ, ಸದನದಲ್ಲಿ ದುರ್ನಡತೆ ತೋರಿದ ಆರೋಪದ ಮೇರೆಗೆ ಮತ್ತೆ ಮೂರು ಸಂಸದರನ್ನು ಅಮಾನತು ಮಾಡ ಲಾಗಿದ್ದು, ಆ ಮೂಲಕ ಅಮಾನತಗೊಂಡ ಸಂಸದರ ಸಂಖ್ಯೆ 144ಕ್ಕೆ ಏರಿಕೆಯಾಗಿದೆ.
ಬುಧವಾರ ಕಲಾಪಕ್ಕೆ ಅಡ್ಡಿ ಪಡಿಸಿ, ಸದನದಲ್ಲಿ ದುರ್ನಡತೆ ತೋರಿದ ಆರೋಪದ ಮೇರೆಗೆ ಥಾಮಸ್ ಚಾಜಿಕಡನ್, ಕೆ ಸಿ ಮಣಿ ಮತ್ತು ಎ ಎಂ ಆರಿಫ್ ಅವರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆ ಅಮಾನತು ಮಾಡಿದೆ. ಈ ಮೂಲಕ ಅಮಾನತುಗೊಂಡ ಸಂಸದರ ಸಂಖ್ಯೆ 144ಕ್ಕೆ ಏರಿಕೆಯಾಗಿದೆ. ಇದು ಸಂಸತ್ ಕಲಾಪದ ಇತಿಹಾಸದಲ್ಲೇ ಅತ್ಯಧಿಕ ಎಂದು ಹೇಳಲಾಗಿದೆ.
ಕಳೆದ ವಾರದಿಂದ ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪದ ಬಗ್ಗೆ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸತ್ ಭದ್ರತಾ ವೈಫಲ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಭಾಷಣ ಮಾಡಬೇಕು ಎಂದು ಅವರು ಒತ್ತಾಯಿಸು ತ್ತಿದ್ದಾರೆ.

Leave a Reply

Your email address will not be published. Required fields are marked *