ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, 42,766 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 308 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 440533 ಕ್ಕೆ ಏರಿಕೆಯಾಗಿದೆ. 410048 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 38091 ಜನರು ಗುಣಮುಖರಾಗಿದ್ದಾರೆ. ಈವರೆಗೆ 32138092 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಶನಿವಾರ ದೇಶದಲ್ಲಿ 17,47,476 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 71,61,760 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 68,46,69,521 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.