Thursday, 15th May 2025

43,263 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

#corona

ನವದೆಹಲಿ : ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 43,263 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ ಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,31,39,981ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 338 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 441749 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 393614 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 40567 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32304618 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 18,17,639 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 86,51,701 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 71,65,97,428 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Leave a Reply

Your email address will not be published. Required fields are marked *