Monday, 12th May 2025

ಸಾಮೂಹಿಕ ಅತ್ಯಾಚಾರ: ನಾಲ್ಕನೇ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್‌ನಲ್ಲಿ ಕಾರಿನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಬಂಧಿಸಲಾಗಿದೆ.

ಈ ಆರೋಪಿ ಸಹ ಅಪ್ರಾಪ್ತನಾಗಿದ್ದು, 5ನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ಕಳೆದ ಶನಿವಾರ ಯುವತಿ ಮೇಲೆ ಕಾರಿನಲ್ಲಿ ಐವರು ಸಾಮೂ ಹಿಕ ಅತ್ಯಾಚಾರ ನಡೆಸಿದ್ದರು. ಈ ಪ್ರಕರಣದಲ್ಲಿ ಮೂವರು ಆರೋಪಿಗಳು ಅಪ್ರಾಪ್ತರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಇದುವರೆಗೂ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ನಾಲ್ಕನೇ ಆರೋಪಿಯನ್ನು ಭಾನುವಾರ ವಶಕ್ಕೆ ಪಡೆಯಲಾಗಿದೆ.

ತೆಲಂಗಾಣ ರಾಜಕೀಯದಲ್ಲಿ ಈ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳಲ್ಲಿ ಅಧಿಕಾರಿಗಳು, ಶಾಸಕರ ಪುತ್ರರು ಭಾಗಿಯಾಗಿದ್ದಾರೆ ಎಂಬ ಆರೋಪವಿದೆ.

ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಲ್ಲಿ ಒಬ್ಬ ಟಿಆರ್‌ಎಸ್ ಮುಖಂಡರೊಬ್ಬರ ಪುತ್ರ. ಕಳೆದ ಶುಕ್ರವಾರ ಒಬ್ಬ ಆರೋಪಿಯನ್ನು ಬಂಧಿಸಲಾಗಿತ್ತು. ಶನಿವಾರ ಮತ್ತಿಬ್ಬರನ್ನು ಬಂಧಿಸಲಾಗಿದೆ. ಭಾನುವಾರ 4ನೇ ಆರೋಪಿ ಬಂಧನವಾಗಿದೆ.