Monday, 12th May 2025

ಚಾಲಕನ ನಿಯಂತ್ರಣ ಬಸ್ ಪಲ್ಟಿ: ಐವರು ಪ್ರಯಾಣಿಕರ ಸಾವು

ಹೈದರಾಬಾದ್: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಐದು ಪ್ರಯಾಣಿಕರು ಮೃತ ಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಐವರಲ್ಲಿ ಮೂವರನ್ನು ಧನೇಶ್ವರ್ ದಳಪತಿ, 24, ಜೀತು ಹರಿಜನ್ 5, ಮತ್ತು ಸುನೈನಾ ಹರಿಜನ್ 2 ಎಂದು ಗುರುತಿಸಲಾಗಿದೆ.

60 ಮಂದಿ ಪ್ರಯಾಣಿಕರಿದ್ದ ಬಸ್ ಒಡಿಶಾದ ಚಿನ್ನಪಲ್ಲಿಯಿಂದ ಆಂಧ್ರಪ್ರದೇಶದ ವಿಜಯವಾಡಕ್ಕೆ ಹೋಗುತ್ತಿದ್ದಾಗ ಏಡು ಗುರಲ್ಲಪಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಪರಿಣಾಮ ಬಸ್ ರಸ್ತೆ ಬದಿಗೆ ಉರುಳಿ ಬಿದ್ದಿದ್ದು, ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನಿಬ್ಬರು ಕೂಡ ಮೃತಪಟ್ಟಿದ್ದಾರೆ.