Wednesday, 14th May 2025

5,664 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

#corona

ವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಕಳೆದ ಎರಡು ದಿನಗಳಿಂದ ಪ್ರತಿನಿತ್ಯ 5 ಸಾವಿರಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ ಮತ್ತೆ 5,664 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,337 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,57,929 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 2,16,56,54,766 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,89,228 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.