Friday, 16th May 2025

58,077 ಹೊಸ ಕೋವಿಡ್ ಪ್ರಕರಣಗಳು ಪತ್ತೆ

covid

ನವದೆಹಲಿ: ಕರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 58,077 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿ, ಸೋಂಕಿನಿಂದ 657 ಮಂದಿ ಮೃತಪಟ್ಟಿದ್ದಾರೆ.

ದೇಶಾದ್ಯಂತ ಒಟ್ಟು ಸೋಂಕಿತರ ಸಂಖ್ಯೆ 42,536,137ರಷ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 6,97,802ಕ್ಕೆ ಇಳಿಕೆಯಾಗಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರೀಸರ್ಚ್ (ಐಸಿಎಂಆರ್) ಮಹಾ ನಿರ್ದೇಶಕ ಡಾ.ಬಲರಾಮ್ ಅವರು ಲಸಿಕೆ ಸಂಬಂಧ ಮಾಹಿತಿ ನೀಡಿ ರಾಷ್ಟ್ರವ್ಯಾಪಿ ಕೋವಿಡ್-19 ಮೊದಲ ಡೋಸ್‍ಅನ್ನು ಶೇ.96 ಪ್ರತಿಶತ ನೀಡಲಾಗಿದೆ.