ಕಿಶ್ತ್ವಾರ್ ಜಿಲ್ಲೆಯಲ್ಲೂ ಸಹ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನ ಕಂದಕಕ್ಕೆ ಬಿದ್ದು, ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿ ದ್ದರೆ, 6ನೇಯವರು ಆಸ್ಪತ್ರೆಗೆ ಸಾಗಿಸಿದ ನಂತರ ಸಾವನ್ನಪ್ಪಿದ್ದಾರೆ. ಮೃತರನ್ನು ಅಬ್ದುಲ್ ಲತೀಫ್, ಅಬ್ದುಲ್ ರೆಹಮಾನ್, ಅತಾ ಮುಹಮ್ಮದ್ , ಇನಾಮ್, ಮೊಹಮ್ಮದ್ ಅಖ್ರಾಮ್ ಮತ್ತು ಜಮೀರ್ (18) ಎಂದು ಗುರುತಿಸಲಾಗಿದೆ.
ಘಟನೆ ನಡೆಯುತ್ತಿದ್ದಂತೆ 26 ರಾಷ್ಟ್ರೀಯ ರೈಫಲ್ಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅಪಘಾತಕ್ಕೆ ನಿಜವಾದ ಕಾರಣ ತಿಳಿದುಬಂದಿಲ್ಲ.