Tuesday, 13th May 2025

ರಾಯ್​ಗಂಜ್‌ನಲ್ಲಿ ಅಪಘಾತ: 6 ವಲಸೆ ಕಾರ್ಮಿಕರ ಸಾವು

ರಾಯ್​ಗಂಜ್​: ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ್ ಜಿಲ್ಲೆಯ ರಾಯ್​ಗಂಜ್‌ನಲ್ಲಿ ವಾಹನಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್​​ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು, 6 ಮಂದಿ ವಲಸೆ ಕಾರ್ಮಿಕರು ಮೃತ ಪಟ್ಟಿದ್ದಾರೆ.

ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್ ರಾಜ್ಯದ 20 ಮಂದಿ ವಲಸೆ ಕಾರ್ಮಿಕರನ್ನು ಹೊತ್ತ ಖಾಸಗಿ ಬಸ್ ಉತ್ತರಪ್ರದೇಶದ ಲಖನೌಗೆ ತೆರಳುತ್ತಿತ್ತು. ರಾಯ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ರುಪಾಹರ್’ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ.

ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, 6 ಮಂದಿ ಶವ ಗಳನ್ನು ಹೊರಗೆ ತೆಗೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ರಾಯ್ಗಂಜ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸ ಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಲಾಕ್ಡೌನ್ ಹಿನ್ನೆಲೆಯಲ್ಲಿ ಮನೆಗಳಿಗೆ ವಾಪಸ್ಸಾಗಿದ್ದ ಕಾರ್ಮಿಕರು ಮರಳಿ ಕೆಲಸಗಳಿಗೆ ತೆರಳಲು ಬಸ್ ನಲ್ಲಿ ಸಂಚರಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

Leave a Reply

Your email address will not be published. Required fields are marked *