Wednesday, 14th May 2025

ಯಶವಂತ್ ಸಿನ್ಹಾಗೆ ಆಮ್ ಆದ್ಮಿ ಪಕ್ಷದ ಬೆಂಬಲ

ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಕಣ ರಂಗೇರುತ್ತಿರುವ ನಡುವೆಯೇ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾಗೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬೆಂಬಲ ಘೋಷಿಸಿದೆ.

ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಆಮ್ ಆದ್ಮಿ ಪಕ್ಷ ಬೆಂಬಲಿಸಲಿದೆ. ನಾವು ದ್ರೌಪದಿ ಮುರ್ಮು ಅವರನ್ನು ಗೌರವಿಸುತ್ತೇವೆ, ಆದರೆ ಯಶವಂತ್ ಸಿನ್ಹಾಗೆ ಮತ ಚಲಾಯಿಸುವುದಾಗಿ ಆಪ್ ಸಂಸದ ಸಂಜಯ್ ಸಿಂಗ್ ತಿಳಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಯ ಎನ್ ಡಿಎ ಬುಡಕಟ್ಟು ಜನಾಂಗದ ಮಹಿಳೆ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತ್ತು.

ಎನ್ಸಿಪಿಯ ಶರದ್ ಪವಾರ್, ಗೋಪಾಲಕೃಷ್ಣ ಗಾಂಧಿ, ಫಾರೂಖ್ ಅಬ್ದುಲ್ಲಾ ರಾಷ್ಟ್ರಪತಿ ಅಭ್ಯರ್ಥಿಯಾಗಲು ನಿರಾಕರಿಸಿದ ನಂತರ ವಿಪಕ್ಷಗಳು ಟಿಎಂಸಿ ಮುಖಂಡ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು.