Wednesday, 14th May 2025

ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ: ಐವರ ಸಾವು

ಮುಂಬೈ: ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ವೇಗವಾಗಿ ಬಂದ ಕಾರು ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತ ಪಟ್ಟಿದ್ದಾರೆ.

ಆಂಬುಲೆನ್ಸ್ ಹಾಗೂ ಇತರ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಸಿದ್ಧತೆ ನಡೆಸುತ್ತಿದ್ದಾಗ ಬುಧವಾರ ಭೀಕರ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಬಾಂದ್ರಾದಲ್ಲಿ ವರ್ಲಿ ಲೇನ್‌ಗೆ ಕರೆದೊಯ್ಯಲು ತಂಡವು ಸಿದ್ಧತೆ ನಡೆಸುತ್ತಿದ್ದಾಗಲೇ ಘಟನೆ ಸಂಭವಿಸಿದೆ.

ಅಪಘಾತದ ನಂತರ ಸ್ಥಳೀಯರ ನೆರವಿನಿಂದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ನಂತರ ಅಧಿಕಾರಿ ಗಳು ಬಾಂದ್ರಾದಿಂದ ವರ್ಲಿಗೆ ಹೋಗುವ ರಸ್ತೆಯನ್ನು ಮುಚ್ಚಿದರು. ಅಪಘಾತದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.