Wednesday, 14th May 2025

ಅಪಘಾತ ತಪ್ಪಿಸಲು ಹೋಗಿ ಮಗುಚಿದ ಬಸ್‌: ಮೂವರ ಸಾವು

ತ್ತೀಸ್‌ಗಢ: ಜಶ್‌ಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬಸ್ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಯಾಗಿದ್ದು, ಮೂರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ  ದಾಖಲಿಸಲಾಗಿದೆ. ಜಶ್‌ಪುರದ ಪಾತಾಳಗಾಂವ್‌ನಿಂದ ಸುರ್ಗುಜಾ ಜಿಲ್ಲೆಯ ಅಂಬಿಕಾಪುರಕ್ಕೆ ಹೋಗುತ್ತಿದ್ದ ಬಸ್ ರಾಂಗ್ ರೂಟ್‌ನಲ್ಲಿ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆ ಯುವುದನ್ನು ತಪ್ಪಿಸುವಾಗ ಈ ಅವಘಡ ಸಂಭವಿಸಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಹಾಗೂ ಓರ್ವ ಬಸ್ ಪ್ರಯಾಣಿಕ ಮೃತಪಟ್ಟಿದ್ದಾರೆ.

ಬಲರಾಮ್ ಲಾಕ್ರಾ, ಅನಂತ ನಾಗವಂಶಿ ಮತ್ತು ದೇವಾನಂದ ಮೃತರು. ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಗಾಯ ಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಯ್ತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.