Sunday, 11th May 2025

ತಮ್ಮ ನಿವಾಸದಲ್ಲಿ ‘ಹರ್ ಘರ್ ತಿರಂಗ’ ಅಭಿಯಾನ ಆಚರಿಸಿದ ಅಮಿತ್ ಶಾ

ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ದೊರೆತ 75ನೇ ವರ್ಷಾಚರಣೆಗೂ ಮುನ್ನ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಕೇಂದ್ರ ಸಚಿವರು ಶನಿವಾರ ದೇಶದಾದ್ಯಂತ ತ್ರಿವರ್ಣ ಧ್ವಜ ಹಾರಿಸುವ ಮೂಲಕ ‘ಹರ್ ಘರ್ ತಿರಂಗ’ ಅಭಿಯಾನ ಆಚರಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಅವರ ಪತ್ನಿ ಸೋನಾಲ್ ಶಾ ತಮ್ಮ ನಿವಾಸ ದಲ್ಲಿ ಭಾರತದ ಧ್ವಜಾರೋಹಣ ಮಾಡಿದರು. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ತಮ್ಮ ಕುಟುಂಬ ಅಭಿಯಾನದಲ್ಲಿ ಪಾಲ್ಗೊಂಡಿರುವ ಫೋಟೋ ಹಂಚಿಕೊಂಡಿದ್ದಾರೆ.

ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಆಚರಿಸಲು ಆ.13 ರಿಂದ 15 ರವರೆಗೆ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಅಥವಾ ಪ್ರದರ್ಶಿಸು ವಂತೆ ಕೇಂದ್ರವು ನಾಗರಿಕರನ್ನು ಒತ್ತಾಯಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸಿದ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶನಿವಾರ ತಮ್ಮ ನಿವಾಸದಲ್ಲಿ ಭಾರತದ ಧ್ವಜಾರೋಹಣ ಮಾಡಿದರು.