Monday, 12th May 2025

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಅಣ್ಣಾಮಲೈ

ಚೆನ್ನೈ: ತಾವು 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವುದೇ ನನ್ನ ಗುರಿ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಅಣ್ಣಾಮಲೈ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರಾದರೂ ಪರಾಭವಗೊಂಡಿ ದ್ದರು.

ತಮಿಳುನಾಡಿನಲ್ಲಿ ಬಿಜೆಪಿ ನೆಲೆಯೂರುವಂತೆ ಮಾಡಲು ಅಣ್ಣಾಮಲೈ ನಿರಂತರ ಪ್ರಯತ್ನ ನಡೆಸಿದ್ದಾರೆ.

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರಿಗೆ ಕೇಂದ್ರ ಸರ್ಕಾರ ಬಿಗಿ ಭದ್ರತೆ ನೀಡಿದ್ದು, ಇದರ ಮಧ್ಯೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಕುರಿತಂತೆ ಅಣ್ಣಾಮಲೈ ಮಹತ್ವದ ಹೇಳಿಕೆ ನೀಡಿದ್ದಾರೆ.

Read E-Paper click here