Sunday, 11th May 2025

ಸ್ಟಾಕ್ ಎಕ್ಸ್‌ಚೇಂಜ್‌ ಪ್ರಕರಣ: ಪ್ರಮುಖ ಆರೋಪಿ ಬಂಧನ

ಮುಂಬೈ: ಸ್ಟಾಕ್ ಎಕ್ಸ್‌ಚೇಂಜ್‌ ಎನ್‌ಎಸ್‌ಇಯ ಗೌಪ್ಯ ಮಾಹಿತಿ ಹಂಚಿಕೆ, ಷೇರು ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿ ಯನ್ನು ಸಿಬಿಐ ಬಂಧಿಸಿವೆ.

ಮಾಜಿ ಮುಖ್ಯಸ್ಥರಾದ ಚಿತ್ರಾ ರಾಮಕೃಷ್ಣ ಹಿಮಾಲಯದ ಓರ್ವ ಯೋಗಿ ಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿ ದ್ದಾರೆ ಎಂದು ಈ ಹಿಂದೆ ವರದಿ ಆಗಿತ್ತು. ಈ ಯೋಗಿಯೇ ಆನಂದ್ ಸುಬ್ರಮಣಿಯನ್ ಎಂದು ಹೇಳಲಾಗಿದೆ.

ಎನ್‌ಎಸ್‌ಇಯ ಮಾಜಿ ಮುಖ್ಯಸ್ಥರು ಚಿತ್ರಾ ರಾಮಕೃಷ್ಣ ಹಿಮಾಲಯದ ಓರ್ವ ಯೋಗಿಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆ ಯೋಗಿಯ ಸಲಹೆಯನ್ನು ಪಡೆದು ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಮಾರುಕಟ್ಟೆ ನಿಯಂತ್ರಕ ಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ತಿಳಿಸಿದೆ ಎಂದು ವರದಿ ಮಾಡಿದೆ.

ಷೇರು ವಿನಿಮಯ ಕೇಂದ್ರ ಎನ್​ಎಸ್​ಇ (NSE)ಗೆ ಮಾಜಿ ಸಿಇಒ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಚಿತ್ರಾ ರಾಮಕೃಷ್ಣ ತಾನು ನೋಡದ, ತನಗೆ ಪರಿಚಯವೇ ಇಲ್ಲದ ಹಿಮಾಲಯದ ಯೋಗಿಯೋರ್ವರ ಸಲಹೆಯನ್ನು ಪಡೆದುಕೊಂಡೇ ನಿರ್ಧಾರ ವನ್ನು ಕೈಗೊಳ್ಳುತ್ತಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರೋಕರೇಜ್ ಹೌಸ್ ಒಪಿಜಿ ಸೆಕ್ಯುರಿಟೀಸ್‌ನ ವ್ಯವಸ್ಥಾ ಪಕ ನಿರ್ದೇಶಕ ಸಂಜಯ್ ಗುಪ್ತಾರನ್ನು ಸಿಬಿಐ ಬಂಧಿಸಿದೆ.

ಕಳೆದ ತಿಂಗಳು ದೇಶದ 10 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿ, ವಿವಿಧ ಸಂಸ್ಥೆಗಳ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ದೆಹಲಿ, ಮುಂಬೈ, ಕೋಲ್ಕತಾ, ಗಾಂಧಿನಗರ, ನೋಯ್ಡಾ ಹಾಗೂ ಗುರುಗ್ರಾಮದಲ್ಲಿನ ಹಣಕಾಸು ಸಂಸ್ಥೆಗಳ ಮೇಲೆ ದಾಳಿ ನಡೆದಿತ್ತು.

ಫೆಬ್ರವರಿ 11 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಷೇರು ನಿಯಂತ್ರಕ ಸೆಬಿ ಆದೇಶ ಹೊರಡಿಸಿ, ಚಿತ್ರಾ ರಾಮಕೃಷ್ಣ ಅವರು ನೇಮಕಾತಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 3 ಕೋಟಿ ರೂಪಾಯಿ ದಂಡವನ್ನು ವಿಧಿಸಿತ್ತು.