Monday, 12th May 2025

ಅರವಿಂದ ಸಾವಂತ್ ಶಿವಸೇನಾ ಮುಖ್ಯ ವಕ್ತಾರ

ಮುಂಬೈ: ಲೋಕಸಭಾ ಸದಸ್ಯ ಅರವಿಂದ ಸಾವಂತ್ ಅವರನ್ನು ಪಕ್ಷದ ಮುಖ್ಯ ವಕ್ತಾರರನ್ನಾಗಿ ಶಿವಸೇನಾ ಪಕ್ಷ ನೇಮಿಸಿದೆ. ಸಂಜಯ್‌ ರಾವುತ್‌ ಅವರು ಮಾತ್ರ ಇದುವರೆಗೆ ಮುಖ್ಯ ವಕ್ತಾರರಾಗಿದ್ದರು.

ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಂಪುಟದಲ್ಲಿ ಶಿವಸೇನಾ ಪಕ್ಷದ ಏಕೈಕ ಸಚಿವರಾಗಿ ಸಾವಂತ್‌ 2019ರವರೆಗೂ ಕಾರ್ಯ ನಿರ್ವಹಿಸಿದ್ದರು. ಬಳಿಕ ಶಿವಸೇನಾ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿತ್ತು. ಈ ಬೆಳವಣಿಗೆಗಳಿಂದ ಸಾವಂತ್‌ ಅವರು ಕೇಂದ್ರದ ಸಂಪುಟಕ್ಕೆ ರಾಜೀನಾಮೆ ನೀಡಬೇಕಾಯಿತು.

ರಾಜ್ಯಸಭಾ ಸದಸ್ಯ ಮತ್ತು ಸಾಮ್ನಾದ ಕಾರ್ಯನಿರ್ವಾಹಕ ಸಂಪಾದಕ ರಾವುತ್‌ ಅವರನ್ನು ಪಕ್ಷವು ಕಳೆದ ಸೆಪ್ಟೆಂಬರ್‌ನಲ್ಲಿ ಪಕ್ಷದ ಮುಖ್ಯ ವಕ್ತಾರರನ್ನಾಗಿ ನೇಮಿಸಿತ್ತು.

ಸಂಜಯ್‌ ರಾವುತ್‌ ಅವರು ಇತ್ತೀಚೆಗೆ ನೀಡಿರುವ ಹಲವು ವಿವಾದಾತ್ಮಕ ಹೇಳಿಕೆಗಳಿಗಾಗಿ ಅವರನ್ನು ಮೂಲೆಗುಂಪು ಮಾಡುವ ಸಲುವಾಗಿ ಅರವಿಂದ ಸಾವಂತ್‌ ಅವರನ್ನೂ ಮುಖ್ಯ ವಕ್ತಾರರನ್ನಾಗಿ ನಿಯೋಜಿಸಲಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *