Sunday, 11th May 2025

ಕೇಜ್ರಿವಾಲ್’ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ನವದೆಹಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ಅವೆನ್ಯೂ ಕೋರ್ಟ್‌ ಆದೇಶ ನೀಡಿದೆ. ಸಿಬಿಐ ನಡೆಸುತ್ತಿರುವ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ, ಅವರಿಗೆ ನೀಡಲಾಗಿದ್ದ ಜಾಮೀನನ್ನು ಪ್ರಶ್ನಿಸಲಾಗಿತ್ತು.

ತನಿಖೆ ಮತ್ತು ಮುಕ್ತ ನ್ಯಾಯಾಂಗ ಪ್ರಕ್ರಿಯೆಯ ದೃಷ್ಟಿಯಿಂದ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಪಡೆಯುವುದು ಅಗತ್ಯವಿದೆ ಎಂದು ಸಿಬಿಐ ಹೇಳಿದೆ. ಮೂರು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು.

2021-22 ರ ದೆಹಲಿಯ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭದ ಪ್ರಮಾಣವನ್ನು ಶೇ. 5 ರಿಂದ 12 ಕ್ಕೆ ಹೆಚ್ಚಿಸಿರುವ ಬಗ್ಗೆ ಯಾವುದೇ ಸಮರ್ಥನೆ ಅಥವಾ ಸತ್ಯವಾದ ವಿವರಣೆ ನೀಡಿಲ್ಲ ಎಂದು ಸಿಬಿಐ ಆರೋಪಿಸಿದೆ.

ಕೇಜ್ರಿವಾಲ್ ಪ್ರಮುಖ ರಾಜಕಾರಣಿ ಮತ್ತು ದೆಹಲಿಯ ಮುಖ್ಯಮಂತ್ರಿಯಾಗಿರುವುದರಿಂದ, ಅತ್ಯಂತ ಪ್ರಭಾವಶಾಲಿ ವ್ಯಕ್ತಿಯಾಗಿರುವುದರಿಂದ, ಕಸ್ಟಡಿ ವಿಚಾರಣೆಯ ಸಮಯದಲ್ಲಿ ಅವರು ಈಗಾಗಲೇ ಬಹಿರಂಗಪಡಿಸಿದ ಸಾಕ್ಷಿಗಳು ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಹುದು. ಇನ್ನೂ ಪರಿಶೀಲಿಸ ಬೇಕಾದವರು, ಮತ್ತಷ್ಟು ಸಂಗ್ರಹಿಸಬೇಕಾದ ಪುರಾವೆಗಳನ್ನು ಹಾಳು ಮಾಡಿ ಮತ್ತು ನಡೆಯುತ್ತಿರುವ ತನಿಖೆಗೆ ಅಡ್ಡಿಯಾಗಬಹುದು ಎಂದು ಸಿಬಿಐ ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿದೆ.

2021-22ರ ದೆಹಲಿ ಮದ್ಯ ನೀತಿಯನ್ನು ರೂಪಿಸುವಾಗ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮೊದಲು ಬಂಧಿಸಿತ್ತು.

Leave a Reply

Your email address will not be published. Required fields are marked *