Monday, 12th May 2025

ಅಯೋಧ್ಯೆಯಲ್ಲಿ ತಿಂಗಳಾಂತ್ಯಕ್ಕೆ ವಿಮಾನಗಳ ಕಾರ್ಯಾಚರಣೆ ಆರಂಭ

ವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಿಂಗಳಾಂತ್ಯಕ್ಕೆ ವಾಣಿಜ್ಯ ಕಾರ್ಯಾ ಚರಣೆಗೆ ಆರಂಭವಾಗಲಿದೆ ಎಂದು ಕೇಂದ್ರದ ವಿಮಾನಯಾನ ಸಚಿವ ಜೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೊಂದಿಗೆ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣವನ್ನು ಪರಿಶೀಲನೆ ನಡೆಸಿದ್ದೇನೆ.

 

ಮೊದಲ ಹಂತ ಕಾಮಗಾರಿ ಪೂರ್ಣಗೊಂಡಿದ್ದು, ತಿಂಗಳಾಂತ್ಯಕ್ಕೆ ವಿಮಾನಗಳ ಕಾರ್ಯಾಚರಣೆ ಆರಂಭವಾಗಲಿದೆ. ವಿಮಾನ ನಿಲ್ದಾಣದ ಪ್ರಗತಿ ಕುರಿತು ಪ್ರತಿದಿನ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇನೆ’ ಎಂದು ಹೇಳಿದ್ದಾರೆ.

2024ರ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟನೆ ಮಾಡಲಿದ್ದಾರೆ. ರಾಮ ಮಂದಿರ ದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಮುನ್ನವೇ ವಿಮಾನ ನಿಲ್ದಾಣ ಕಾರ್ಯನಿರ್ವಹಿಸಲಿದೆ ಎಂದು ಹೇಳಿದ್ದಾರೆ.

‘ವಿಮಾನ ನಿಲ್ದಾಣದ ಮೊದಲ ಹಂತವು 6,250 ಚದರ ಮೀಟರ್‌ಗಳಷ್ಟು ವಿಸ್ತಾರವಾದ ಟರ್ಮಿನಲ್ ಅನ್ನು ಒಳಗೊಂಡಿದೆ. ಅಯೋಧ್ಯೆಯ ಸಾಂಸ್ಕೃ ತಿಕ ಶ್ರೀಮಂತಿಕೆಯನ್ನು ವಿಮಾನ ನಿಲ್ದಾಣ ಪ್ರತಿಬಿಂಬಿಸುತ್ತದೆ. 2ನೇ ಹಂತದ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಬಳಿಕ ಅಧಿಕ ವಿಮಾನಗಳು ನಿಲ್ದಾಣದಲ್ಲಿ ಇಳಿಯಬಹುದು’ ಎಂದು ಸಿಂಧಿಯಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *