Monday, 12th May 2025

ಬಾರಾಮುಲ್ಲಾದಲ್ಲಿ ಎನ್‌ಕೌಂಟರ್‌: ಓರ್ವ ಉಗ್ರನ ಹತ್ಯೆ

ಜಮ್ಮುಕಾಶ್ಮೀರ: ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ದಾಳಿ ಸಂಭವಿಸಿ, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.

ಶನಿವಾರ ಬಾರಾಮುಲ್ಲಾದ ಕರ್ಹಾಮಾ ಕುಂಜರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ದಾಳಿ ಮುಂದುವರಿದಿದ್ದು, ಭಯೋತ್ಪಾದಕರನ್ನು ಮಟ್ಟ ಹಾಕಲು ಪೊಲೀಸರು ಮತ್ತು ಭದ್ರತಾ ಪಡೆಗಳು ಒಟ್ಟಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಜಮ್ಮು ವಲಯದ ಭದ್ರತಾ ಪರಿಸ್ಥಿತಿ ಯನ್ನು ಪರಿಶೀಲಿಸಲು ಜಮ್ಮುವಿಗೆ ಭೇಟಿ ನೀಡು ತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜೌರಿಯಲ್ಲಿ 5 ಯೋಧರು ಹುತಾತ್ಮರಾಗಿದ್ದರು. ಶುಕ್ರವಾರ ರಾಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಸ್ಫೋಟದಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು. ಭಯೋತ್ಪಾದಕರನ್ನು ಹೊಡೆದುರುಳಿಸುವ ಕಾರ್ಯಾಚರಣೆ ನಡೆಯುತ್ತಿರುವ ರಾಜೌರಿಯ ದಟ್ಟ ಅರಣ್ಯದ ಕಾಂಡಿ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ.