Tuesday, 13th May 2025

‘ಭಾರತ್ ಜೋಡೋ ಯಾತ್ರೆ’: ನ.10, 18 ರಂದು ಮಹಾರಾಷ್ಟ್ರದಲ್ಲಿ ರ‍್ಯಾಲಿ

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ‘ಭಾರತ್ ಜೋಡೋ ಯಾತ್ರೆ’ಯ ಭಾಗವಾಗಿ ನ.10 ಮತ್ತು 18 ರಂದು ಮಹಾರಾಷ್ಟ್ರದಲ್ಲಿ ಎರಡು ರ್ಯಾಲಿ ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾದ ಯಾತ್ರೆಯು ನೆರೆಯ ತೆಲಂಗಾಣದಿಂದ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ದೆಗ್ಲೂರ್ನಲ್ಲಿರುವ ಮದ್ನೂರ್ ನಾಕಾವನ್ನು ನ.7 ರಂದು ಸಂಜೆ 7 ಗಂಟೆಗೆ ತಲುಪಲಿದೆ. ‘ರಾಹುಲ್ ಗಾಂಧಿ ಅವರು ಮಹಾರಾಷ್ಟ್ರದಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ನ.10 ರಂದು ನಾಂದೇಡ್ ಜಿಲ್ಲೆಯಲ್ಲಿ ಮೊದಲ ರ್ಯಾಲಿ ಉದ್ದೇಶಿಸಿ ಮಾತನಾಡ ಲಿದ್ದಾರೆ.
ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯು ತನ್ನ 14 ದಿನಗಳ ಪ್ರವಾಸದಲ್ಲಿ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳು ಮತ್ತು ಆರು ಸಂಸದೀಯ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಇದು ನವೆಂಬರ್ 20 ರಂದು ಮಧ್ಯಪ್ರದೇಶವನ್ನು ಪ್ರವೇಶಿಸುವ ಮೊದಲು ರಾಜ್ಯದ ಐದು ಜಿಲ್ಲೆಗಳಲ್ಲಿ 382 ಕಿಮೀ ದೂರವನ್ನು ಕ್ರಮಿಸಲಿದೆ.