Sunday, 11th May 2025

ಮುಖ್ಯಮಂತ್ರಿಯಾಗಿ ಭೂಪೇಂದ್ರ ಭಾಯಿ ಪಟೇಲ್ ಆಯ್ಕೆ

ವದೆಹಲಿ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ, ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಭೂಪೇಂದ್ರ ಭಾಯಿ ಪಟೇಲ್ ಆಯ್ಕೆಯಾಗಿದ್ದಾರೆ. ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಹೊಸದಾಗಿ ಚುನಾಯಿತರಾದ ಬಿಜೆಪಿ ಶಾಸಕರು ಗಾಂಧಿನಗರ ಪಕ್ಷದ ಕಚೇರಿಯಲ್ಲಿ ಸಭೆ ಹಮ್ಮಿಕೊಂಡಿದ್ದರು. ಇದರಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಉಪಸ್ಥಿತ ರಿದ್ದರು.

ಹೊಸ ಗುಜರಾತ್ ಹೊಸ ಸಚಿವ ಸಂಪುಟ ಡಿಸೆಂಬರ್ 12 ರಂದು ಮುಖ್ಯಮಂತ್ರಿಯೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದರಲ್ಲಿ 12ಕ್ಕೂ ಹೆಚ್ಚು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಕೈಗೆತ್ತಿಕೊಳ್ಳುವ ಕುರಿತು ಕೇಳಿದ ಪ್ರಶ್ನೆಗೆ ಪಟೇಲ್, ಸಮಿತಿ ರಚಿಸಲಾಗಿದ್ದು, ಅವರ ಶಿಫಾರಸಿನ ಆಧಾರದ ಮೇಲೆ ಕೆಲಸ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.