Sunday, 11th May 2025

ಭೂಪೇಂದ್ರ ಪಟೇಲ್ ರಾಜೀನಾಮೆ, ಡಿ.12 ರಂದು ಪ್ರಮಾಣ ವಚನ

ವದೆಹಲಿ: ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶುಕ್ರವಾರ ಗಾಂಧಿನಗರದ ರಾಜಭವನಕ್ಕೆ ಆಗಮಿಸಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಸಲ್ಲಿಸಿದರು.

ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯು ತನ್ನ ಪಕ್ಷದ ಪ್ರಧಾನ ಕಚೇರಿ ಕಮಲಂನಲ್ಲಿ ಶನಿವಾರ ಬೆಳಗ್ಗೆ 10 ಗಂಟೆಗೆ ನಡೆಯ ಲಿದೆ. ನೂತನ ಸರ್ಕಾರ ರಚನೆಗೆ ಪಕ್ಷದ ಅಧ್ಯಕ್ಷ ಸಿ.ಆರ್.ಪಾಟೀಲ್ ಅವರು ಶನಿವಾರ ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿ ಸಮಯಾವಕಾಶ ಕೋರಿದ್ದಾರೆ ಎನ್ನಲಾಗುತ್ತಿದೆ.

ಗುಜರಾತ್ ಹೊಸ ಸಚಿವ ಸಂಪುಟ ಡಿ.12 ರಂದು ಮುಖ್ಯಮಂತ್ರಿಯೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದರಲ್ಲಿ ಹನ್ನೆರಡಕ್ಕೂ ಹೆಚ್ಚು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಗುಜರಾತ್‌ನಲ್ಲಿ ಐತಿಹಾಸಿಕ ಜನಾದೇಶ ಪಡೆದುಕೊಂಡಿರುವ ಬಿಜೆಪಿ ಗುರುವಾರ ರಾಜ್ಯದ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಮುಂದುವರಿಯಲಿದ್ದು, ಡಿ.12 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಬಿಜೆಪಿ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳ ಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ ತಿಳಿಸಿದ್ದಾರೆ.