Monday, 12th May 2025

ಉನಾ ಜಿಲ್ಲೆಯಲ್ಲಿ ಭಾರೀ ಸ್ಫೋಟ: ಆರು ಮಂದಿ ಸಾವು, 12 ಜನರಿಗೆ ಗಾಯ

ಶಿಮ್ಲಾ: ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಸ್ಫೋಟಕ್ಕೆ 6 ಮಂದಿ ಮೃತಪಟ್ಟು, 12 ಜನರು ಗಂಭೀರವಾಗಿ ಗಾಯಗೊಂಡಿ ದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಉನಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ.

ಉನಾದ ಬತು ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಇದರಲ್ಲಿ 6 ಜನರು ಸಜೀವ ದಹನವಾಗಿದ್ದಾರೆ. 12 ಜನರು ಸ್ಪೋಟದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ವರದಿಯಾಗಿದೆ. ಸ್ಫೋಟ ಸಂಭವಿಸಿದ ಕಾರ್ಖಾನೆಯನ್ನು ಪಟಾಕಿ ಕಾರ್ಖಾನೆ ಎಂದು ಹೇಳಲಾಗಿದೆ. ಅಪಘಾತದ ಸುದ್ದಿ ತಿಳಿದ ನಂತರ ಅಗ್ನಿಶಾಮಕ ದಳ ಮತ್ತು ಇತರ ಕೆಲವು ಆಡಳಿತಾಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ರಕ್ಷಣಾ ಕಾರ್ಯಚರಣೆಯನ್ನು ನಡೆಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ ಸೂಚಿಸಿ, ‘ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭ ವಿಸಿದ ಅಪಘಾತ ದುಃಖಕರವಾಗಿದೆ. ನಾನು ಗಾಯಗೊಂಡ ಎಲ್ಲರಿಗೂ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಬಯಸುತ್ತೇನೆ” ಎಂದಿದ್ದಾರೆ.

ಇನ್ನು ಹಿಮಾಚಲ ಪ್ರದೇಶದ ಕಾರ್ಖಾನೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ 50,000 ರೂ.ಗಳನ್ನು ನೀಡುವುದಾಗಿ ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.