Monday, 12th May 2025

ಕಲ್ಲು ಕ್ವಾರಿಯಲ್ಲಿ ಸ್ಫೋಟ: 3 ಮಂದಿ ಸಾವು

ವಿರುದುನಗರ: ತಮಿಳುನಾಡಿನ ವಿರುದುನಗರ ಜಿಲ್ಲೆಯ ಕರಿಯಾಪಟ್ಟಿ ಪ್ರದೇಶದಲ್ಲಿ ಬುಧವಾರ ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿದ್ದು ಹಲವು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮೂವರ ಶವ ಪತ್ತೆಯಾಗಿದೆ, ಭಾರೀ ಸ್ಫೋಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವರದಿಗಳ ಪ್ರಕಾರ, ಶೇಖರಣಾ ಕೊಠಡಿಯಲ್ಲಿ ಸ್ಫೋಟಕಗಳಿದ್ದು ಅಲ್ಲೇ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ರಕ್ಷಣಾ ತಂಡಗಳು ಅವಶೇಷಗಳನ್ನು ಎಚ್ಚರಿಕೆಯಿಂದ ತೆರವುಗೊಳಿಸುತ್ತಿವೆ ಮತ್ತು ಸ್ಫೋಟಗೊಳ್ಳದ ವಸ್ತುಗಳನ್ನು ಹುಡುಕುತ್ತಿವೆ.

ಸುರಕ್ಷತಾ ಅಪಾಯಗಳು ಮತ್ತು ಓವರ್‌ಲೋಡ್ ಟ್ರಕ್‌ಗಳನ್ನು ಒಳಗೊಂಡ ಅನೇಕ ವಿಚಾರಗಳ ಬಗ್ಗೆ ಹಲವು ದಿನಗಳಿಂದ ದೂರು ಬರುತ್ತಿತ್ತು. ಸ್ಫೋಟದ ಮೊದಲು ಕ್ವಾರಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ವರದಿಯಾಗಿದೆ.

ಫೆಬ್ರವರಿಯಲ್ಲಿ ವಿರುಧನಗರ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಒಂಬತ್ತು ಜನರು ಸಾವನ್ನಪ್ಪಿದರು ಮತ್ತು 10 ಮಂದಿ ಗಾಯಗೊಂಡಿದ್ದರು.

Leave a Reply

Your email address will not be published. Required fields are marked *