Monday, 12th May 2025

ಬಾಯ್ಲರ್ ಸ್ಫೋಟ: ಹಲವರಿಗೆ ಗಾಯ, ಐವರ ಸಾವು

#Patna

ಪಾಟ್ನಾ: ಬಿಹಾರದ ಮುಜಾಫರ್‌ಪುರದ ಬೇಲಾದಲ್ಲಿ ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡು ಅಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಸ್ಫೋಟ ದಲ್ಲಿ ಐವರು ಮೃತಪಟ್ಟಿದ್ದಾರೆ.

ಬಾಯ್ಲರ್ ಸ್ಫೋಟಗೊಂಡಿದ್ದರಿಂದ ಭಾರೀ ಸ್ಫೋಟ ಸಂಭವಿಸಿದೆ. ಕಂಪನವು ಸುಮಾರು ನಾಲ್ಕು ಕಿಲೋ ಮೀಟರ್ ವರೆಗೆ ಅನುಭವವಾಯಿತು ಮತ್ತು ಸುತ್ತಮುತ್ತಲಿನ ಪ್ರದೇಶದ ಅನೇಕ ಮನೆಗಳ ಬಾಗಿಲು ಮತ್ತು ಕಿಟಕಿಗಳು ಅಲುಗಾಡಿದವು.

ಮಾಧ್ಯಮ ವರದಿಗಳ ಪ್ರಕಾರ ಸ್ಫೋಟ ಸಂಭವಿಸಿದ ಕಾರ್ಖಾನೆಯಲ್ಲಿ ನೂಡಲ್ಸ್ ತಯಾರಿಸಲಾಗುತ್ತಿತ್ತು. ಸ್ಫೋಟದಲ್ಲಿ ಕಾರ್ಖಾನೆ ಸಂಪೂರ್ಣ ನಾಶ ವಾಗಿದೆ. ಸ್ಫೋಟದಿಂದಾಗಿ ಹತ್ತಿರದ ಕಾರ್ಖಾನೆಗಳು ಹಾನಿಗೊಳಗಾಗಿವೆ. ಮುಜಾಫರ್‌ಪುರ ಎಸ್‌ಎಸ್‌ಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.

ಗಾಯಾಳುಗಳನ್ನು ಸದರ್ ಆಸ್ಪತ್ರೆಗೆ ಮತ್ತು ಎಸ್‌ಕೆಎಂಸಿಎಚ್‌ಗೆ ರವಾನಿಸಲಾಗಿದೆ.