Thursday, 15th May 2025

ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್ ಶರಣ್ ಸಿಂಗ್

ವದೆಹಲಿ: ʻನನ್ನ ವಿರುದ್ಧದ ಆರೋಪ ನಿಜವೆಂದು ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆʼ ಎಂದು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಭಾನುವಾರ ಹೇಳಿದ್ದಾರೆ.

ಸಿಂಗ್ ಅವರ ಬಂಧನ ಮತ್ತು ಭಾರತದ ಉನ್ನತ ಕುಸ್ತಿ ಸಂಸ್ಥೆಯ ಹುದ್ದೆಯಿಂದ ವಜಾ ಗೊಳಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ತಮ್ಮ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಈ ಹೇಳಿಕೆ ಬಂದಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಿಂಗ್, ʻನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆʼ ಎಂದಿದ್ದಾರೆ.