Monday, 12th May 2025

ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಹೌರಾ: ಹಳೆ ವಿವಾದವೊಂದರ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬುಧವಾರ ರಾತ್ರಿ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮೃತರಲ್ಲಿ ಇಬ್ಬರು ಮಹಿಳೆಯರು, ಹದಿಹರೆಯದವರು ಮತ್ತು ಅಪ್ರಾಪ್ತ ಬಾಲಕಿ ಸೇರಿದ್ದಾರೆ.

ಹತ್ಯೆಯ ಹಿಂದೆ ದಂಪತಿಯ ಕೈವಾಡವಿದೆ ಎನ್ನಲಾಗಿದೆ. ಘಟನೆ ನಂತರ ಪ್ರಮುಖ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ನಿಯನ್ನು ಬಂಧಿಸಲಾಗಿದೆ. ಸ್ಥಳೀಯ ಮೂಲಗಳ ಪ್ರಕಾರ, ರಾತ್ರಿ ಮನೆಯ ಬಾಗಿಲಿನಿಂದ ರಕ್ತ ಹರಿದು ಬರುತ್ತಿರುವು ದನ್ನು ಕಂಡ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ತಂಡವು ರಕ್ತದ ಮಡುವಿನಲ್ಲಿ ಬಿದ್ದಿದ್ದ ನಾಲ್ಕು ಶವಗಳನ್ನು ಹೊರತೆಗೆದಿದೆ.