Tuesday, 13th May 2025

ಕರ್ನಾಟಕದಲ್ಲಿ ಯಡಿಯೂರಪ್ಪ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದ ನಡ್ಡಾ

ಪಣಜಿ: ಕರ್ನಾಟಕ ಬಿಜೆಪಿಯ ನಾಯಕತ್ವ ಬದಲಾವಣೆ ಚರ್ಚೆಗೆ ದೊಡ್ಡ ತಿರುವು ದೊರೆತಿದೆ. ಗೋವಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಯಡಿಯೂರಪ್ಪರನ್ನು ಹಾಡಿಹೊಗಳಿದ್ದು, ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಉತ್ತಮವಾಗಿ ನಡೆಯುತ್ತಿದೆ. ಉಳಿದಂತೆ, ಯಡಿಯೂರಪ್ಪನವರು ಕೂಡ ಎಲ್ಲ ವಿಷಯಗಳನ್ನೂ ಉತ್ತಮವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ” ಎಂದರು.

ಇಂದು ಸಂಜೆಯೊಳಗೆ ಸಿಎಂ ಸ್ಥಾನದಲ್ಲಿ ಬದಲಾವಣೆಯಾಗಲಿದ್ದು, ಈ ನಿಟ್ಟಿನಲ್ಲಿ ಸಿಎಂ ಬಿಎಸ್‌ವೈ ಕೂಡ ಹೈಕಮಾಂಡ್‌ ತೀರ್ಮಾನವೇ ಅಂತಿಮ ಅಂತ ಹೇಳಿದ್ದರು.

ಈ ನಡುವೆ ಗೋವಾದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಎಸ್‌ವೈ ಪರ ಬ್ಯಾಟ್‌ ಬೀಸಿದ್ದು, ಬಿಎಸ್‌ ಯಡಿಯ್ಯೂರಪ್ಪನವರು ಕೆಲಸವನ್ನು ಚೆನ್ನಾಗಿ ಮಾಡುತ್ತಿದ್ದು, ಕರೋನ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

Leave a Reply

Your email address will not be published. Required fields are marked *